ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ…!!!

ಕೊಪ್ಪಳ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಗಂಗಾವತಿ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು 1.5 ಲಕ್ಷ ರೂ. ದಂಡ ಸಹಿತ 20 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಗಂಗಾವತಿಯ ಹೆಚ್.ಆರ್.ಎಸ್ ಕಾಲೋನಿಯ ನಿವಾಸಿ ಹುಲ್ಲೇಶ ಕೊಜ್ಜ ಎಂಬ ಆರೋಪಿಯು ಪ್ರಕರಣದ ಅಪ್ರಾಪ್ತ ವಯಸ್ಸಿನ ಬಾಲಕಿ ಶಾಲೆಗೆ ಹೋಗಿ ಬರುವಾಗ ಬಾಧಿತಳನ್ನು ಹಿಂಬಾಲಿಸಿ ಚುಡಾಯಿಸುತ್ತಿದ್ದನು. 2022 ರ ಸೆಪ್ಟೆಂಬರ್ 7 ರಂದು ಬೆಳಗ್ಗೆ 9 ಗಂಟೆಗೆ ಬಾಲಕಿಳು ಶಾಲೆಗೆ ಹೋಗುವ ಸಮಯದಲ್ಲಿ ಹೊಸಳ್ಳಿ ಕ್ರಾಸ್ ಹತ್ತಿರ ತನ್ನ ಮಾವನ ಮೋಟಾರ್ ಸೈಕಲ್ ತೆಗೆದುಕೊಂಡು ಬಂದು ಶಾಲೆಗೆ ಬಿಡುವುದಾಗಿ ಹೇಳಿ ಮೋಟಾರ್ ಸೈಕಲ್ ಮೇಲೆ ಹತ್ತುವಂತೆ ಹೇಳಿದಾಗ ಬಾಲಕಿ ನಿರಾಕರಿಸಿದ್ದಳು. ಅವಳನ್ನು ಹೆದರಿಸಿ ಮೋಟಾರ್ ಸೈಕಲ್ ಮೇಲೆ ಕೂರಿಸಿಕೊಂಡು ಶಾಲೆಗೆ ಬಿಡದೇ ಬಲವಂತವಾಗಿ ಮಲ್ಲಾಪುರ ಸೀಮಾದ ವಾನಭದ್ರೇಶ್ವರ ಗುಡ್ಡಕ್ಕೆ ಕರೆದುಕೊಂಡು ಹೋಗಿ 2 ದಿನಗಳ ಕಾಲ ಅತ್ಯಾಚಾರ ಎಸಗಿದ್ದನು. ಹಾಗೂ ಈ ವಿಷಯವನ್ನು ಯಾರಿಗಾದರೂ ಹೇಳಿದಲ್ಲಿ ನಿನ್ನ ಮತ್ತು ನಿನ್ನ ಅಪ್ಪನನ್ನು ಸಾಯಿಸುವುದಾಗಿ ಜೀವ ಹೆದರಿಕೆ ಹಾಕಿದ್ದ. ಪ್ರಕರಣವು ಸ್ಪೇ.ಎಸ್ಸಿ(ಪೋಕ್ಸೊ) ಸಂ: 13/2024 ರಲ್ಲಿ ದಾಖಲಾಗಿ ವಿಚಾರಣೆಗೊಂಡಿದ್ದು, ವಿಚಾರಣೆಯನ್ನು ನಡೆಸಿದ ಗಂಗಾವತಿಯ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಆರೋಪಿಯ ಮೇಲಿನ ಆರೋಪಣೆಗಳು ಸಾಬೀತಾಗಿವೆ ಎಂದು 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುವಂತೆ ಹಾಗೂ ರೂ. 1,50,000 ಗಳ ದಂಡವನ್ನು ಭರಿಸುವಂತೆ ಆದೇಶಿಸಿ ಡಿಸೆಂಬರ್ 19 ರಂದು ತೀರ್ಪು ಪ್ರಕಟಿಸಿದ್ದಾರೆ.

Post a Comment

0 Comments