ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಬಸ್ ದುರಂತ ಪ್ರಕರಣ: 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು 20 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಸಿಎಂ ಸಿದ್ದರಾಮಯ್ಯ ಮೃತಪಟ್ಟ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಚಿತ್ರದುರ್ಗದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.50,000 ಪರಿಹಾರ ನೀಡಲಾಗುವುದು. ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಸಂತ್ರಸ್ತರ ನೆರವಿಗೆ ನಿಲ್ಲುವಂತೆ ಸೂಚಿಸಿದ್ದೇನೆ. ಈ ಬಗ್ಗೆ ತನಿಖೆ ನಡೆಸಿ, ಅಪಘಾತಕ್ಕೆ ಕಾರಣ ಪತ್ತೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ

Post a Comment

0 Comments