ಖಾಸಗಿ ಬಸ್‌ಗೆ ಬೆಂಕಿ: 9ಕ್ಕೂ ಹೆಚ್ಚು ಜನ ಸಾವು

ಚಿತ್ರದುರ್ಗ: ಚಿತ್ರದುರ್ಗದ ಹಿರಿಯೂರು ಬಳಿ ಬೆಳ್ಳಂ ಬೆಳಿಗ್ಗೆ ದುರಂತವೊಂದು ಸಂಭವಿಸಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಖಾಗಿ ಬಸ್ಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರು ನೋಡ ನೋಡುತ್ತಿದ್ದಂತೆಯೇ ಸುಟ್ಟು ಭಸ್ಮವಾಗಿದ್ದಾರೆ. ಹೌದು ಬೆಂಗಳೂರಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ನಲ್ಲಿ ಡ್ರೈವರ್ ಕಂಡಕ್ಟರ್ ಸೇರಿ 30 ಜನ ಪ್ರಯಾಣಿಸುತ್ತಿದ್ದರು. ಆದರೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಜವನಗೊಂಡಹಳ್ಳಿ ಬಳಿ ಬಸ್ ಅತೀ ವೇಗವಾಗಿ ಕಂಟೇನರ್ಗೆ ಡಿಕ್ಕಿ ಹೊಡೆದಿದ್ದು ನೋಡ ನೋಡುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ಕೆನ್ನಾಲಿಗೆಗೆ ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ಸುಟ್ಟು ಕರಕಲಾಗಿದ್ದಾರೆ ಎನ್ನಲಾಗಿದೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಂಕಿ ತಗುಲಿದ ಬೆನ್ನಿಗೇ ಕೆಲ ಪ್ರಯಾಣಿಕರು ಇಳಿದಿದ್ದಾರೆ. ಆದರೆ ಅಷ್ಟರಲ್ಲೇ ಬೆಂಕಿ ಹರಡಿಕೊಂಡಿದ್ದು, ಅಧಿಕ ಮಂದಿ ಇದರಲ್ಲಿ ಸಿಲುಕಿ ಪ್ರಾಣ ಬಿಟ್ಟಿದ್ದಾರೆ. ಇನ್ನು ಅಪಘಾತದ ಮಾಹಿತಿ ಪಡೆದ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. 20 ಕಿಲೋಮೀಟರ್ ಮೀಟರ್ ಟ್ರಾಫಿಕ್ ಜಾಮ್: ಇನ್ನು ಮುಂಜಾನೆ ಸಂಭವಿಸಿದ ಈ ಅಪಘಾತದಿಂದ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಫುಲ್ ಟ್ರಾಫಿಕ್ ಜಾಮ್ ಆಗಿದೆ. ಶಿರಾ ಹಿರಿಯೂರು ನಡುವೆ ಸುಮಾರು 20 ಕಿಲೋಮೀಟರ್ ದೂರ ವಾಹನಗಳು ನಿಂತಿವೆ. ಆಂಬುಲೆನ್ಸ್‌ಗಳು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

Post a Comment

0 Comments