ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ಸಾವು…!!!

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು-ಮೈಸೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಈ ದುರಂತ ಸಂಭವಿಸಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಕಾರು ಚಾಲಕ ಗೋವಿಂದರಾಜು, ಅಶೋಕ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಾಳುವನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Post a Comment

0 Comments