ನಾಳೆ ಕಾರವಾರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ..!!!!!!!

ನವದೆಹಲಿ/ಕಾರವಾರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಕಾರವಾರದ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆ ಮೂಲಕ ಸಮುದ್ರ ಯಾನ ಕೈಗೊಳ್ಳಲಿದ್ದಾರೆ ಎಂದು ರಾಷ್ಟ್ರಪತಿ ಭವನ ಮಾಹಿತಿ ನೀಡಿದೆ.
ಈ ಮೂಲಕ ದ್ರೌಪದಿ ಮುರ್ಮು ಅವರು ಜಲಾಂತರ್ಗಾಮಿಯಲ್ಲಿ ಸಾಗಲಿರುವ ದೇಶದ ಮೊದಲ ಮಹಿಳಾ ರಾಷ್ಟ್ರಪತಿ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಡಾ. ಅಬ್ದುಲ್ ಕಲಾಂ ಅವರು ಜಲಾಂತರ್ಗಾಮಿ ನೌಕೆಯಲ್ಲಿ ಯಾನ ಕೈಗೊಂಡ ಮೊದಲ ರಾಷ್ಟ್ರಪತಿ. ಅವರು 2006ರಲ್ಲಿ ಬಂಗಾಳಕೊಲ್ಲಿಯಲ್ಲಿ ಐಎನ್ಎಸ್ ಸಿಂಧು ರಕ್ಷಕ್ ಸಬ್ ಮರೀನ್ ನಲ್ಲಿ 3.5 ಗಂಟೆ ಯಾನ ಮಾಡಿದ್ದರು. ಇದೀಗ ರಾಷ್ಟ್ರಪತಿ ದ್ರೌಪದಿ ಮುರ್ಮು ಕಾರವಾರ ನೌಕಾನೆಲೆಯಲ್ಲಿ ಜಲಾಂತರ್ಗಾಮಿ ನೌಕೆಯ ಮೂಲಕ ಸಮುದ್ರಯಾನ ಕೈಗೊಳ್ಳಲಿದ್ದಾರೆ. ಡಿ. 28ರಂದು ಕಾರವಾರ ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 3:30ರವರೆಗೆ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಭಾನುವಾರ ಮಧ್ಯಾಹ್ನ 3.30ರವರೆಗೆ ಹಾರವಾಡದಿಂದ ಮಾಜಾಳಿವರೆಗಿನ ಸಮುದ್ರ ತೀರದಲ್ಲಿ ಮೀನುಗಾರಿಕೆ ನಿರ್ಬಂಧಿಸಿದ್ದು, ಎಲ್ಲಾ ಮೀನುಗಾರರು ಮತ್ತು ದೋಣಿ ಮಾಲೀಕರು ಸೂಚನೆಯನ್ನು ಪಾಲಿಸುವಂತೆ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Post a Comment

0 Comments